Bengaluru,ಬೆಂಗಳೂರು, ಮೇ 9 -- ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 (Karnataka SSLC Results 2024) ಅನ್ನು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಇಂದು (ಮೇ 9) ಪ್ರಕಟಿಸಿದೆ. ಕೆಎಸ್‌ಇಎಬಿ 10 ನೇ ತರಗತಿಯ ರಿಸಲ್ಟ್‌ (KSEAB 10th Results) ಇಂದು (ಗುರುವಾರ) ಬೆಳಗ್ಗೆ 10.30ಕ್ಕೆ ಪ್ರಕಟವಾಗಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದವು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ಅನ್ನು ಮಾರ್ಚ್ - ಏಪ್ರಿಲ್‌ನಲ್ಲಿ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಆಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ 1 ರ ಫಲಿತಾ...