Bengaluru,ಬೆಂಗಳೂರು, ಮೇ 9 -- ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳ ಪ್ರಕಾರ ಕರ್ನಾಟಕ ಸರ್ಕಾರವು, 2024-25 ಶೈಕ್ಷಣಿಕ ವರ್ಷಕ್ಕೆ ಮೂರು ವರ್ಷಗಳ ಪದವಿ ಕಾರ್ಯಕ್ರಮವನ್ನು ಮರುಪರಿಚಯಿಸಿದೆ. ಅದೇ ರೀತಿ, ಪದವಿ ಪಠ್ಯ ರಚನೆಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ, ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಕಾರ ಸಾರ್ವಜನಿಕ ವಿಶ್ವವಿದ್ಯಾಲಯಗಳು ಮತ್ತು ಅಂಗಸಂಸ್ಥೆ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಶಿಫಾರಸು ಮಾಡಿದ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.

ಕರ್ನಾಟಕ ಸರ್ಕಾರದ ಈ ಹೊಸ ಆದೇಶವು 2021-22, 2022-23, 2023-24 ನೇ ಶೈಕ್ಷಣಿಕ ವರ್ಷಗಳಲ್ಲಿ ಪದವಿಗೆ ಪ್ರವೇಶಾತಿ ಪಡೆದು ಪ್ರಸ್ತುತ ವಿವಿಧ ಸೆಮಿಸ್ಟರ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂಬುದನ್ನು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಅದೇ ರೀತಿ, ಪ್ರಸಕ್ತ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ 4ನೇ ವರ್ಷದ ಆನರ್ಸ್ ಪದವಿ...