Bengaluru,ಬೆಂಗಳೂರು, ಮಾರ್ಚ್ 8 -- ಬೆಂಗಳೂರು ಕೇವಲ ರಾಜ್ಯದ ರಾಜಧಾನಿ ಮಾತ್ರವಲ್ಲ, ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ನಗರವೂ ಹೌದು. ಹಾಗಾಗಿ ಇಲ್ಲಿನ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಎಂಬ ಕುತೂಹಲ ಸಹಜವಾಗಿಯೇ ಮೂಡುತ್ತದೆ. 2009 ರಿಂದಲೂ ಇಲ್ಲಿನ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಆರಿಸಿ ಬರುತ್ತಿದ್ದಾರೆ. ಡಿವಿ ಸದಾನಂದಗೌಡ (ಬೆಂಗಳೂರು ಉತ್ತರ) (ಪಿಸಿ ಮೋಹನ್ (ಬೆಂಗಳೂರು ಸೆಂಟ್ರಲ್) ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ) ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಆದರೆ ಈ ಬಾರಿಯ ಚುನಾವಣೆ ಎರಡೂ ಪಕ್ಷಗಳಿಗೆ ಸವಾಲಾಗಿ ಪರಿಣಮಿಸಿದೆ.

ಬೆಂಗಳೂರಿನಲ್ಲಿ ಉಭಯ ಪಕ್ಷಗಳು ಸರಿಸಮಾನಾಗಿ ರಾಜಕೀಯ ಪ್ರಾತಿನಿಧ್ಯ ಹೊಂದಿವೆ. ಎಂಟು ತಿಂಗಳ ಹಿಂದೆ ಮುಗಿದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎರಡೂ ಪಕ್ಷಗಳು ಗಮನಾರ್ಹ ಸಾಧನೆ ಮಾಡಿವೆ. 28 ಕ್ಷೇತ್ರಗಳ ಪೈಕಿ 16ರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೂ ಕಾಂಗ್ರೆಸ್ ಮತಗಳಿಕೆ ಸುಧಾರಿಸಿದೆ.

ಇತ್ತೀಚೆಗಷ್ಟೇ ಉಪಮುಖ...