Bengaluru,ಬೆಂಗಳೂರು, ಮಾರ್ಚ್ 16 -- ನವದೆಹಲಿ: ಲೋಕಸಭೆ ಚುನಾವಣೆ 2024ರ (General Election 2024) ದಿನಾಂಕ, ವೇಳಾಪಟ್ಟಿ ಮತ್ತು ಇತರೆ ವಿವರಗಳನ್ನು ಭಾರತದ ಚುನಾವಣಾ ಆಯೋಗ ಇಂದು (ಮಾರ್ಚ್ 16) ಮಧ್ಯಾಹ್ನ ನಂತರ 3 ಗಂಟೆಗೆ ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಈ ವಿವರಗಳನ್ನು ಪ್ರಕಟಿಸಲಿದ್ದಾರೆ.

ನವದೆಹಲಿಯಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದ್ದು, ಲೋಕಸಭೆಯ 543 ಸ್ಥಾನಗಳ ಚುನಾವಣೆ (Lok Sabha Election 2024) ದಿನಾಂಕ, ಫಲಿತಾಂಶ ಪ್ರಕಟವಾಗುವ ದಿನ ಸೇರಿದ ವೇಳಾಪಟ್ಟಿ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಯ ಜೊತೆಗೆ ಕೆಲವು ವಿಧಾನಸಭೆ ಚುನಾವಣೆಗಳೂ ನಡೆಯಲಿವೆ.

ಈ ಪತ್ರಿಕಾಗೋಷ್ಠಿಯನ್ನು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಘೋ‍ಷಿಸಿದೆ.

ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿಯ ವಿವರ ನೀಡುವುದಕ್ಕಾಗಿ ಭಾರತದ ಚುನಾವಣಾ ಆಯೋಗದ ಮುಖ್ಯಸ್ಥರಾದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅ...