ಭಾರತ, ಏಪ್ರಿಲ್ 28 -- ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ್ಧಾರೆ ಎನ್ನುವ ಕುರಿತು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಹೊಳೆ ನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ದವೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ರೇವಣ್ಣ ಅವರ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಮಹಿಳೆ ದೂರು ನೀಡಿದ್ದು. ದೂರಿನಂತೆ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ. ಹೊಳೆ ನರಸೀಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಪ್ರಜ್ವಲ್‌ ವಿರುದ್ದದ ತನಿಖೆಗೆ ಹಿರಿಯ ಪೊಲೀಸ್‌ ಅಧಿಕಾರಿಗಳನ್ನೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ರೇವಣ್ಣ ಪ್ರಕರಣವನ್ನು ಇದಕ್ಕೆ ಸೇರಿಸಬಹುದೆ ಎನ್ನುವ ಚರ್ಚೆಗಳು ನಡೆದಿವೆ.

ಇದನ್ನೂ ಓದಿರಿ: KSRTC News: ಕರ್ನಾಟಕದ ಸಾರಿಗೆ ಬಸ್‌ಗಳಲ್ಲಿ ಸದ್ಯವೇ ಕ್ಯಾಶ್‌ಲೆಸ್‌ ಸೇವೆ, ಯುಪಿಐ ಮೂಲಕ ಹಣ ಪಾವತಿ

ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಎಚ್‌.ಡಿ ರೇವಣ್ಣ ಹೆಸರಿದ್ದರೆ, ಎರಡನೇ ಆರೋಪಿಯಾಗಿ ಪ್ರಜ್ವಲ...