ಭಾರತ, ಏಪ್ರಿಲ್ 20 -- Neha Murder Case: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಹಾಡಹಗಲೇ ನಡೆದ ನೇಹಾ ಹಿರೇಮಠ ಹತ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಬರೀ ಕರ್ನಾಟಕ ಮಾತ್ರವಲ್ಲ, ದೇಶವ್ಯಾಪಿ ವಿರೋಧ ವ್ಯಕ್ತವಾಗಿದೆ. ಲವ್‌ ಜಿಹಾದ್‌ ಎಂಬ ಆರೋಪದ ನಡುವೆ ವ್ಯಾಪಕ ಪ್ರತಿಭಟನೆಗಳೂ ನಡೆಯುತ್ತಿವೆ. ಬಂಧಿತ ಫಯಾಜ್‌ನಿಗೆ ಅತ್ಯುಗ್ರ ಶಿಕ್ಷೆಯಾಗಬೇಕು ಎಂದು ಸಂಘಟನೆಗಳು ಆಗ್ರಹಿಸುತ್ತಿವೆ. ಈ ನಡುವೆ ಫಯಾಜ್‌ ತಂದೆಯೂ, ಆತನಿಗೆ ಉಗ್ರ ಶಿಕ್ಷೆಯನ್ನೇ ನೀಡಿ ಎಂದಿದ್ದಾರೆ. ಸ್ಯಾಂಡಲ್‌ವುಡ್‌ ಚಿತ್ರರಂಗದಿಂದಲೂ ಖಂಡನೆ ವ್ಯಕ್ತವಾಗಿದೆ.

ಸೋಷಿಯಲ್‌ ಮೀಡಿಯಾ Xನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಟ ಧ್ರುವ ಸರ್ಜಾ, "ಸಹೋದರಿ ನೇಹಾ ಹಿರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ.ಕ್ಯಾಂಪಸ್ ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ.ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು.ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆ...