ಭಾರತ, ಮೇ 25 -- ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಎಲ್ಲರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಸದ್ಯ ಮಹಿಳೆ ಮೇಲಿನ ಅತ್ಯಾಚಾರ ಆರೋಪದ ಅಡಿಯಲ್ಲಿ ಜೈಲು ಪಾಲಾಗಿರುವ ಮಡೆನೂರು ಮನು, ಸೋಷಿಯಲ್ ಮೀಡಿಯಾದಲ್ಲಿಯೂ ಕಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಸ್ಟಾರ್ ನಟರ ಬಗ್ಗೆ ಹಗುರವಾಗಿ ಮಾತನಾಡಿದ ಆಡಿಯೋ ಕ್ಲಿಪ್ವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ವಿವಾದಕ್ಕೆ ತುಪ್ಪ ಸುರಿದಂತಾಗಿದೆ. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಎರಡು ಪೋಸ್ಟ್ ಹಂಚಿಕೊಂಡಿರುವ ನಟ ಜಗ್ಗೇಶ್, ಎಲ್ಲಿಯೂ ಮಡೆನೂರು ಮನು ಅವರ ಹೆಸರನ್ನು ಪ್ರಸ್ತಾಪ ಮಾಡದೆ ಚಾಟಿ ಬೀಸಿದ್ದಾರೆ. ಅಷ್ಟಕ್ಕೂ ನಟ ಜಗ್ಗೇಶ್ ಹೇಳಿದ ಮಾತೇನು? ಇಲ್ಲಿದೆ ಓದಿ. "ಒಂದು ಗಾದೆ ಮಾತು ನೆನಪಾಯಿತು! ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದಂಗೆ. ಗುರುಹಿರಿಯರ ಮೇಲೆ ಗೌರವ ತೋರದವನು ಗೆದ್ದ ಇತಿಹಾಸ ಇಲ್ಲಾ! ಇಂದು ಇದ್ದದ್ದು ನಾ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.