ಭಾರತ, ಜೂನ್ 21 -- ಧೀರಜ್ ಎಂ.ವಿ ನಿರ್ದೇಶನದ, ಅಭಿರಾಮ ಅರ್ಜುನ ಬ್ಯುಸಿನೆಸ್ ಹೆಡ್ ಆಗಿ ಕಾರ್ಯನಿರ್ವಹಿಸಿರುವ ʻಕಪಟ ನಾಟಕ ಸೂತ್ರಧಾರಿʼ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಜುಲೈ 4ರಂದು ತೆರೆಕಾಣಲಿರುವ ಈ ಸಿನಿಮಾದ ಪ್ರಧಾನ ಕಥಾ ಸುಳಿವೊಂದು ಈ ಮೂಲಕ ಜಾಹೀರಾದಂತಾಗಿದೆ. ಭಾರತದ ಪ್ರಥಮ ನ್ಯೂ ಏಜ್ ಪೊಲಿಟಿಕಲ್ ಸಟೈರ್ ಸಿನಿಮಾ ಎಂಬುದೂ ಸೇರಿದಂತೆ ಒಂದಷ್ಟು ವಿಶೇಷತೆಗಳ ಮೂಲಕ ಗಮನ ಸೆಳೆದುಕೊಂಡಿದ್ದ ಚಿತ್ರವಿದು. ಬಿಡುಗಡೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಚಿತ್ರತಂಡ ಟ್ರೈಲರ್ ಅನ್ನು ಪ್ರೇಕ್ಷಕರ ಮುಂದಿಟ್ಟಿದೆ. ನಮ್ಮ ಸಮಾಜದಲ್ಲಿನ ಪ್ರಸ್ತುತ ಸ್ಥಿತಿಗತಿಗತಿಗಳನ್ನು ಕಣ್ಣೆದುರು ತರುವಂಥ ದೃಶ್ಯಗಳ ಮೂಲಕ ಈ ಟ್ರೈಲರ್ ಕುತುಹಲ ಮೂಡಿಸಿದೆ.

ಈ ನೆಲದ ಜನಸಾಮಾನ್ಯರಲ್ಲಿ ಸಹಜವಾಗಿ ನೆಲೆಗೊಂಡಿರುವ ಧಾರ್ಮಿಕ ಭಾವನೆಗಳು ರಾಜಕಾರಣದ ಕಪಿಮುಷ್ಠಿಗೆ ಸಿಲುಕಿಕೊಂಡಿರುವ ಕಾಲಮಾನವಿದು. ಒಂದು ಸಮುದಾಯದ ನಂಬಿಕೆಯ ತಾಣಕ್ಕೆ ಮತ್ತೊಂದು ಸಮುದಾಯದ ಯುವಕ ಸಹಜ ಕುತೂಹಲದಿಂದ ಭೇಟಿ ನೀಡಿದಾಗ ಘಟಿಸುವ ಕಥನದ ಬಿಂದುವಿನಿಂದ ರೋಚಕ ಕಥನವೊಂದು ಬಿಚ್ಚ...