Bengaluru, ಏಪ್ರಿಲ್ 26 -- ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ ʻಕುಲದಲ್ಲಿ ಕೀಳ್ಯಾವುದೋʼ ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ ಅನಾವರಣ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಯಿತು. ಈ ಚಿತ್ರ ಮೇ 23ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ʻಕುಲದಲ್ಲಿ ಕೀಳ್ಯಾವುದೋʼ ಸಾರ್ವಕಾಲಿಕ ಜನಪ್ರಿಯ ಗೀತೆ.‌ ಇಂತಹ ಜನಪ್ರಿಯ ಗೀತೆಯ ಸಾಲನಿಟ್ಟುಕೊಂಡು ಹಾಡು ಬರೆಯುವುದು ಅಷ್ಟು ಸುಲಭದ ಮಾತಲ್ಲ. ಈ ಹಾಡನ್ನು ಯೋಗರಾಜ್ ಭಟ್ ಅವರ ಹತ್ತಿರ ಬರೆಸುವುದು ಅಂತ ನಿರ್ಧಾರವಾಯಿತು. ಆದರೆ ಅವರು ʻಮನದ ಕಡಲುʼ ಚಿತ್ರದ ಬಿಡುಗಡೆಯ ಬ್ಯುಸಿಯಲ್ಲಿದ್ದರು. ಹಾಗಾಗಿ ಅವರೇ ನನಗೆ ಈ ಹಾಡನ್ನು...