Bengaluru, ಮೇ 27 -- ಪಿಸಿಡಿ 2 ಫಿಲಂ ಫ್ಯಾಕ್ಟರಿ ಬ್ಯಾನರ್‌ನಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್. ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ ಠಾಣೆ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ತರುಣ್‌ ಸುಧೀರ್‌ ಮಾಲತಿ ಸುಧೀರ್ ಠಾಣೆ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯದರ್ಶಿ ಸಂತೋಷ್ ಹಾನಗಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್‌ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಮೇ 30 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾತನಾಡಿದರು.

ಠಾಣೆ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ನಟಿ ಮಾಲತಿ ಸುಧೀರ್ ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಿರ್ದೇಶಕ ಭಗತ್ ರಾಜ್, ʻಠಾಣೆʼ ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಚಿತ್ರ. ʻಠಾಣೆʼ ಎಂದರೆ ಪೊಲೀಸ್ ಸ್ಟೇಷನ್. ಆ ಪೊಲೀಸ್ ಠಾಣೆಯ ಒಂದು ಕೇಸ್ ಕುರಿತು ನಾಲ್ಕು ಪ್ರಮುಖ ಪಾತ್ರಗಳ ಕುರಿತು ನಡೆಯುವ ಕ...