ಭಾರತ, ಜುಲೈ 2 -- ಬೆಂಗಳೂರು: ಇದೇ 2025ರ ಮೇ ತಿಂಗಳ 30 ರಂದು ಕನ್ನಡದಲ್ಲಿ ತೆರೆಕಂಡ 'ತಾಯವ್ವ' ಚಿತ್ರ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. 'ಅಮರ ಫಿಲಂಸ್' ಬ್ಯಾನರಿನಲ್ಲಿ ಗೀತಪ್ರಿಯಾ ನಿರ್ಮಿಸಿ, ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ 'ತಾಯವ್ವ' ಮಹಿಳಾ ಪ್ರದಾನ ಕಥಾಹಂದರವನ್ನು ಹೊಂದಿದ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಗ್ರಾಮೀಣ ಭಾಗದ ಸೂಲಗಿತ್ತಿ ಮಹಿಳೆಯ ಬದುಕನ್ನು ಅನಾವರಣ ಮಾಡಲಾಗಿದೆ.

ಸದ್ಯ ಬಿಡುಗಡೆಯಾಗಿರುವ 'ತಾಯವ್ವ' ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಚಿತ್ರತಂಡ, 'ತಾಯವ್ವ' ಚಿತ್ರದ ಯಶಸ್ವಿ ಪತ್ರಿಕಾಗೋಷ್ಟಿ (ಸಕ್ಸಸ್ ಮೀಟ್) ಆಯೋಜಿಸಿತ್ತು.

ಈ ಸಮಾರಂಭದಲ್ಲಿ ಹಿರಿಯ ನಟ ಸುರೇಶ್ ಹೆಬ್ಳೀಕರ್, ಸಂಗೀತ ನಿರ್ದೇಶಕ ಕೆ. ಕಲ್ಯಾಣ್, ಲಹರಿ ವೇಲು, ನಿರ್ದೇಶಕರಾದ ಯೋಗರಾಜ್ ಭಟ್, ಹರಿಪ್ರಸಾದ್ ಜಯಣ್ಣ, ನಿರ್ಮಾಪಕ ಸಿಲ್ಕ್ ಮಂಜು, 'ಕೃಪಾನಿಧಿ ಸಮೂಹ ಶಿಕ್ಷಣ ಸಂಸ್ಥೆ'ಗಳ ಅಧ್ಯಕ್ಷ ಸುರೇಶ್ ನಾಗಪಾಲ...