Bagalore, ಏಪ್ರಿಲ್ 29 -- ಬೆಂಗಳೂರು: ಉತ್ತರಪ್ರದೇಶದ ವಾರಣಾಸಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ವಿದೇಶಿ ಪ್ರಜೆಯೊಬ್ಬ ವಿಮಾನದಲ್ಲೇ ಹೇಳಿಕೊಂಡ ನಂತರ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅದರಲ್ಲೂ ವಿಮಾನದೊಳಗಿದ್ದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.ಈ ಸಂಬಂಧ ಕೆನಡಾ ಮೂಲದ ಪ್ರಯಾಣಿಕ ನಿಶಾಂತ್‌ ಎಂಬಾತನನ್ನು ಬಂಧಿಸಲಾಗಿದೆ. ಭದ್ರತಾ ಸಿಬ್ಬಂದಿ ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಬೆದರಿಕೆ ನಂತರ, ಸಂಪೂರ್ಣ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಆದರೆ ಯಾವುದೇ ಸ್ಫೋಟಕ ವಸ್ತು ಕಂಡುಬಂದಿಲ್ಲ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ತಿಳಿಸಿದ್ದಾರೆ.

ಕೆನಡಾ ಪ್ರಯಾಣಿಕನ ಹೇಳಿಕೆಯ ನಂತರ ಇಂಡಿಗೋ ಸಿಬ್ಬಂದಿ ತಕ್ಷಣವೇ ಬೆದರಿಕೆಯ ಬಗ್ಗೆ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಗೆ ಮಾಹಿತಿ ನೀಡಿದ್ದರು. ಭದ್ರತಾ ನಿಯಮಾವಳ...