Bengaluru, ಏಪ್ರಿಲ್ 22 -- ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಿ.ವಿ. ಗುಂಡಪ್ಪ(ಡಿ.ವಿ.ಜಿ) ಅವರ ಜನಪ್ರಿಯ ಪದ್ಯ ಪುಸ್ತಕ ʻಮಂಕುತಿಮ್ಮನ ಕಗ್ಗʼ ಇದೀಗ ಸಿನಿಮಾ ರೂಪದಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದಲ್ಲಿ ಈಗಾಗಲೇ ಕೆಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ರಾಜ ರವಿಶಂಕರ್, ಡಿವಿಜಿ ಅವರ ʻಮಂಕುತಿಮ್ಮನ ಕಗ್ಗʼವನ್ನು ಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದ್ದು ಮೇ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.

"ಈ ಚಿತ್ರದಲ್ಲಿ‌‌ ಡಿವಿಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ಬಾಲ್ಯದಲ್ಲಿ ಡಿವಿಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರ ಮಾವ ತಿಮ್ಮಣ್ಣ ಮೇಷ್ಟ್ರು. ಸೋದರ ಮಾವ ಹಾಗೂ ಸೋದರಳಿಯನ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಸೋಮಿ (ಡಿವಿಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ...