Bengaluru, ಮಾರ್ಚ್ 24 -- Manada Kadalu Trailer: ಇ.ಕೆ ಎಂಟರ್ಟೈನರ್ಸ್ ಬ್ಯಾನರ್‌ನಲ್ಲಿ ಈ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಚಿತ್ರ ʻಮನದ ಕಡಲುʼ. ಇತ್ತೀಚೆಗೆ ಈ ಬಹುನಿರೀಕ್ಷಿತ ಚಿತ್ರದ ಟ್ರೇಲರ್‌ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ‌. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು.

ಲುಲು ಮಾಲ್ ಹೊರಾಂಗಣದಲ್ಲಿ ನಡೆದ ಮನದ ಕಡಲು ಟ್ರೇಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ‌ ಜಮಾಯಿಸಿದ್ದರು. ಕಣ್ಣು ಹಾಯಿಸಿದಷ್ಟು "ಜನರ ಕಡಲು" ಅಲ್ಲಿತ್ತು‌. ವರ್ಣರಂಜಿತ ಸಮಾರಂಭದಲ್ಲಿ ಟ್ರೇಲರ್ ಬಿಡುಗಡೆ ಮಾಡಿದ ಯಶ್, ನಂತರ ತಮ್ಮ ಅದ್ಭುತವಾದ ಮಾತುಗಳ ಮೂಲಕ ಚಿತ್ರತಂಡಕ್ಕೆ ಹಾರೈಸಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭ...