Bengaluru, ಮೇ 19 -- ಯುದ್ಧಕಾಂಡ ಸಿನಿಮಾದ ಮೂಲಕ ನಿರ್ಮಾಪಕನಾಗಿ ಅದೃಷ್ಟಪರೀಕ್ಷೆಗಿಳಿದಿದ್ದ ನಟ ಅಜೇಯ್ ರಾವ್, ಇದೀಗ ಆ ಯುದ್ಧ ಗೆದ್ದ ಬಳಿಕ ಹೊಸ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಆ ಚಿತ್ರಕ್ಕೆ ʻಸರಳ ಸುಬ್ಬರಾವ್ʼ ಎಂಬ ಶೀರ್ಷಿಕೆ ಇಡಲಾಗಿದೆ. 1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ʻಸರಳ ಸುಬ್ಬರಾವ್ʼ ಚಿತ್ರವನ್ನು ಮಂಜು ಸ್ವರಾಜ್ ನಿರ್ದೇಶನ ಮಾಡುತ್ತಿದ್ದಾರೆ. ರಿಯಾನ್ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ಲೋಹಿತ್ ನಂಜುಂಡಯ್ಯ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇದೀಗ ಇದೇ ಚಿತ್ರದ ಹಾಡೊಂದು ಬಿಡುಗಡೆ ಆಗಿದೆ.
ಈ ಚಿತ್ರದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಇದೀಗ ಚಿತ್ರೀಕರಣ ಮುಗಿಸಿಕೊಂಡಿರುವ ಚಿತ್ರತಂಡ ಇದೇ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದೆ. ಆ ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ. ಸಂಜಿತ್ ಹೆಗ್ಡೆ ಹಾಡಿಗೆ ಧ್ವನಿಯಾಗಿದ್ದಾರೆ. ಸರಿಗಮ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯವಿದೆ. ಹಾಡು ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.