ಭಾರತ, ಜುಲೈ 2 -- ನಟ ಕೋಮಲ್ ಕುಮಾರ್ ಸದ್ದಿಲ್ಲದೆ ಹೊಸಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ. ಹೌದು, ಕೋಮಲ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಚಿತ್ರಕ್ಕೆ 'ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್' ಎಂದು ಹೆಸರಿಡಲಾಗಿದ್ದು, ಇದೀಗ ಈ ಸಿನಿಮಾದ ಟೈಟಲ್ ಪೋಸ್ಟರ್ ಪ್ರೋಮೋ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ.

ಈ ಹಿಂದೆ 'ಕತ್ತಲೆ ಕೋಣೆ', 'ಇನಾಂದಾರ್', 'ಗುಂಮ್ಟಿ' ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ 'ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್' ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 'ಜ್ಯೋತಿ ಪ್ರೊಡಕ್ಷನ್ಸ್' ಬ್ಯಾನರಿನಲ್ಲಿ ವಿಕಾಸ್ ಎಸ್. ಶೆಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಇನ್ನು 'ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್' ಸಿನಿಮಾದಲ್ಲಿ ನಾಯಕ ಕೋಮಲ್ ಅವರಿಗೆ ಅನುಷಾ ರೈ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ. ನಟಿ ಮೇಘನಾ ರಾಜ್ ಕೂಡ ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳ...