ಭಾರತ, ಮಾರ್ಚ್ 23 -- Anganwadi Workers: ಕರ್ನಾಟಕದ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ಶುಭ ಸುದ್ದಿ ಇದೆ. ಕರ್ನಾಟಕದಲ್ಲಿ ಈಗಾಗಲೇ ಮಹಿಳೆಯರನ್ನು ಫಲಾನುಭವಿಗಳನ್ನಾಗಿಸುವ ಗೃಹಲಕ್ಷ್ಮಿ, ಶಕ್ತಿ ಯೋಜನೆಗಳು ಜಾರಿಯಲ್ಲಿವೆ. ಇದಲ್ಲದೆ, ಅನ್ನಭಾಗ್ಯ, ಯುವನಿಧಿ, ಗೃಹಜ್ಯೋತಿ ಯೋಜನೆಗಳು ಚಾಲ್ತಿಯಲ್ಲಿವೆ. ಈ 5 ಗ್ಯಾರೆಂಟಿ ಯೋಜನೆಗಳಲ್ಲದೇ 6 ಗ್ಯಾರೆಂಟಿ ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂಬ ಸುಳಿವು ನೀಡಿದ್ದಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌.

ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಕೈಗೊಳ್ಳುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಅವರು ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡುತ್ತ, ಕಳೆದ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 2017ರಲ್ಲಿ...