ಭಾರತ, ಫೆಬ್ರವರಿ 1 -- ಬೆಂಗಳೂರು: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ತೆರವುಗೊಳಿಸಲು ಮುಂದಾದ ಘಟನೆ ನಡೆದಿದೆ. ಇದಕ್ಕೆ ಪ್ರತಿಭಟನಾ ನಿರತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಪೊಲೀಸರು ಹಾಗೂ ಶಾಮಿಯಾನ ಸಿಬ್ಬಂದಿ ಬರಿಗೈಲಿ ಹಿಂತಿರುಗಬೇಕಾಯಿತು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಳೆದ ನಾಲ್ಕು ದಿನಗಳಿಂದ ಚಳಿ, ಬಿಸಿಲು ಲೆಕ್ಕಿಸದೆ ಧರಣಿ ನಡೆಸುತ್ತಿದ್ದಾರೆ. ಏಕಾಏಕಿ ಸ್ಥಳಕ್ಕೆ ಧಾವಿಸಿದ ಪೊಲೀಸ್‌ ಸಿಬ್ಬಂದಿ, ತೆರವು ಮಾಡುವಂತೆ ಸೂಚಿಸಿದರು. ಇದರಿಂದ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟುಹಿಡಿದರು. ನಮ್ಮ ಟೆಂಟ್‌ ಕಿತ್ತರೆ ನಿಮ್ಮ ...