ಭಾರತ, ಮೇ 14 -- ದೆಹಲಿ:ಕಳೆದ ತಿಂಗಳು ಅಂತಾರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ಕಾರಣ ಪಾಕಿಸ್ತಾನ ರೇಂಜರ್‌ಗಳಿಂದ ಬಂಧಿಸಲ್ಪಟ್ಟ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪೂರ್ಣಮ್ ಕುಮಾರ್ ಶಾ ಅವರನ್ನು ಬುಧವಾರ ಅಟ್ಟಾರಿಯ ಚೆಕ್ ಪೋಸ್ಟ್‌ನಲ್ಲಿ ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ."2025ರ ಏಪ್ರಿಲ್ 23 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಬಿಎಸ್‌ಎಫ್ ಜವಾನ್ ಪೂರ್ಣಮ್ ಕುಮಾರ್ ಸಾಹು ಅವರನ್ನು ಪಂಜಾಬ್‌ಮ ಅಮೃತಸರದ ಅಟ್ಟಾರಿಯ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30 ಗಂಟೆಗೆ ಭಾರತಕ್ಕೆ ಹಸ್ತಾಂತರಿಸಲಾಯಿತು. ಹಸ್ತಾಂತರವನ್ನು ಶಾಂತಿಯುತವಾಗಿ ಮತ್ತು ಒಪ್ಪಿತ ಶಿಷ್ಟಾಚಾರಗಳಿಗೆ ಅನುಗುಣವಾಗಿ ನಡೆಸಲಾಯಿತು" ಎಂದು ಗಡಿ ಭದ್ರತಾ ಪಡೆ ಹೇಳಿಕೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ಪಂಜಾಬ್‌ನ ಫಿರೋಜ್‌ಪುರದಲ್ಲಿ ನಿಯೋಜನೆಗೊಂಡಿದ್ದ 40 ವರ್ಷದ ಬಿಎಸ್‌ಎಫ್ ಸಿಬ್ಬಂದಿ ಏಪ್ರಿಲ್ 23 ರಂದು ಆಕಸ್ಮಿಕವಾಗಿ ಗಡಿ ದಾಟಿದ್ದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ...