ಭಾರತ, ಮಾರ್ಚ್ 24 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್​​ಗಳಿಂದ ಗೆಲುವು ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಚೆಂಡು ವಿರೂಪಗೊಳಿಸಿ ಪಂದ್ಯವನ್ನು ಗೆದ್ದುಕೊಂಡಿದೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಅದಕ್ಕೆ ಸಂಬಂಧಿಸಿ ಅನುಮಾನ ಹುಟ್ಟಿಸುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮತ್ತೆ ಫಿಕ್ಸಿಂಗ್ ಮಾಡಿದೆ ಎಂದು ಟೀಕೆಗೆ ಗುರಿಯಾಗಿದೆ.

ಚೆನ್ನೈನ ಚೆಪಾಕ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಇನ್ನಿಂಗ್ಸ್​ ಆರಂಭಿಸಿದ ಮುಂಬೈ, ಸಿಎಸ್​ಕೆ ಬೌಲರ್​ಗಳ ದಾಳಿಗೆ ತತ್ತರಿಸಿತು. ಪರಿಣಾಮ ಎಂಐ 20 ಓವರ್​​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ಈ ಗುರಿ ಹಿಂಬಾಲಿಸಿದ ಸಿಎಸ್​ಕೆ 19.1 ಓವರ್​​ಗಳಲ್ಲಿ 6 ವಿಕೆಟ್ ಕಳೆದುಕೊಂಡು 158 ರನ್ ಪೇರಿಸಿತು. ಕ...