Bangalore, ಏಪ್ರಿಲ್ 11 -- ಬೆಂಗಳೂರು: ಕಾಂಗ್ರೆಸ್‌ ಪಕ್ಷ ಹೆಜ್ಜೆ ಹೆಜ್ಜೆಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರನ್ನು ಅವಮಾನಿಸುತ್ತಲೇ ಬಂದಿದೆ. ಅಂಬೇಡ್ಕರ್‌ ಗೆದ್ದಂತಹ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಂತಹ ದುರುಳ ನೀತಿ ತೋರಿದವರು ಕಾಂಗ್ರೆಸ್ಸಿಗರು. ಈಗ ದಲಿತರ ವೋಟ್‌ ಬ್ಯಾಂಕ್‌ಗಾಗಿ ಮೊಸಳೆ ಕಣ್ಣೀರಿಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು "ಭೀಮ ಹೆಜ್ಜೆ" ಶತಮಾನ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅಂಬೇಡ್ಕರ್‌ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಲೆಂದೇ ಕಾಂಗ್ರೆಸ್‌ ಅಂದು ಅಂಬೇಡ್ಕರ್‌ ಗೆದ್ದಂತಹ ಜೈಸೂರು, ಕುಲ್ಲಾ, ಹರೀದ್ಪುರ ಪ್ರದೇಶಗಳನ್ನು ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿತು ಎಂದು ಗಂಭೀರ ಆರೋಪ ಮಾಡಿದರು.

ದೇಶಕ್ಕೆ ಒಂದು ಸಂವಿಧಾನದ ಸುಭದ್ರ ಚೌಕಟ್ಟು ನಿರ್ಮಿಸಿಕೊಟ್ಟಂತಹ ಮಾಹಾನ್‌ ನಾಯಕ ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಪಕ್ಷ ಸ್ವತಂತ್ರ ಪೂರ್ವದಿಂದಲೂ ಮಹಾ ಅಮಾನಗಳನ್...