Bangalore, ಏಪ್ರಿಲ್ 10 -- ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ವರ್ಗಗಳ ಅಸಂಘಟಿತ ಕಾರ್ಮಿಕರು ನೋಂದಾಯಿಸಬಹುದು. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಪ್ರಾರಂಭಿಕವಾಗಿ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗುತ್ತಿತ್ತು, ಪ್ರಸ್ತುತ ಹೊಸದಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, ಮತ್ತು 3ಬಿ ಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟಾರೆ 91 ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ.

ನೋಂದಣಿಗೆ ಅರ್ಹರಿರುವ ಪ್ರಾರಂಭಿಕವಾಗಿ ಗುರುತಿಸಲಾದ 26 ವರ್ಗಗಳ ಅಸಂಘಟಿತ ಕಾರ್ಮಿಕರ ವಿವರ ಇಂತಿದೆ. ಹಮಾಲರು, ಟೈಲರ್‌ಗಳು, ಗೃಹ ಕಾರ್ಮಿಕರು, ಅಗಸರು, ಚಿಂದಿ ಆಯುವವರು, ಅಕ್ಕಸಾಲಿಗರು, ಕಮ್...