ಭಾರತ, ಏಪ್ರಿಲ್ 22 -- ಟಾಲಿವುಡ್‌ನ ಸ್ಟಾರ್ ನಟ, ಸೂಪರ್‌ಸ್ಟಾರ್ ಮಹೇಶ್ ಬಾಬು ‌ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಯಿ ಸೂರ್ಯ ಡೆವಲಪರ್ಸ್ ಎಂಬ ರಿಯಲ್ ಎಸ್ಟೇಟ್ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿರುವ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟೀಸ್ ಜಾರಿ ಮಾಡಿದೆ. ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುಹಾನಾ ಗ್ರೂಪ್‌ಗಳ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಇಡಿ ದಾಖಲಿಸಿದೆ. ಹೀಗಾಗಿ ಆ ಕಂಪನಿಯ ಪ್ರಚಾರಕರಾಗಿರುವ ಮಹೇಶ್ ಬಾಬು ಅವರಿಗೂ ನೋಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದೆ.

ಸಾಯಿ ಸೂರ್ಯ ಡೆವಲಪರ್ಸ್ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿರುವ ಟಾಲಿವುಡ್ ನಟ ಮಹೇಶ್ ಬಾಬು ಅವರು ಏಪ್ರಿಲ್ 27ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ನೀಡುವಂತೆಯೂ ಸೂಚಿಸಿದೆ. ಆ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿರುವುದರಿಂದ ಸಾಯಿ ಸೂರ್ಯ ಡೆವಲಪರ್ಸ್ ಕಂಪನಿಯಿಂದ ಮಹೇಶ್ ಬಾಬು ರೂ. 5.9 ಕೋಟಿ ಪಡೆದಿದ್ದಾರೆ ಎಂದು ಇಡಿ ಹೇಳಿದೆ. ಇದರಲ್ಲಿ ರೂ.3.4 ಕೋಟಿ ಚೆ...