ಭಾರತ, ಏಪ್ರಿಲ್ 15 -- ಮಂಗಳೂರು: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಡಿವೈಡರ್ಗೆ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್ಪಿ ಪೆಟ್ರೋಲ್ ಪಂಪ್ನ ಮುಂಭಾಗದಲ್ಲಿ ರಾತ್ರಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು 10 ಮಂದಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ.
ಕುಂದಾಪುರ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್ಗೆ ಡಿಕ್ಕಿಯಾಗಿದೆ. ಬಸ್ಸಿನ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಡಿವೈಡರ್ಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಹಾಸನದ ಪಾಳ್ಯ ನಿವಾಸಿ ದಂಪತಿಗಳಾದ ಚಂದ್ರು(68) ಹಾಗೂ ಅವರ ಪತ್ನಿ ಸರೋಜಾ (60) ಹಾಗೂ ಇನ್ನೊಬ್ಬರು ಪ್ರಯಾಣಿಕರು ಸೇರಿ ಮೂವರು ಗಂಭೀರ ಗಾಯಗೊಂಡಿದ್ದು ಅವರನ್ನು...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.