Bengaluru,Vijayapura, ಮಾರ್ಚ್ 27 -- ವಿಜಯಪುರ: ಬಿಜೆಪಿಯಿಂದ 6 ವರ್ಷಕ್ಕೆ ಉಚ್ಚಾಟಿಸಲ್ಪಟ್ಟ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೇ ಮೊದಲ ಪ್ರತಿಕ್ರಿಯೆಯನ್ನು ಟ್ವೀಟ್ ಮೂಲಕ ನೀಡಿದ್ದಾರೆ. ಅಡ್‌ಜಸ್ಟ್‌ಮೆಂಟ್‌ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುತ್ತೆ, ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ ಎಂದು ಮತ್ತೊಮ್ಮೆ ಬಸನಗೌಡ ಪಾಟೀಲ್‌ ಯತ್ನಾಳ್ ಬಿಜೆಪಿ ಹೈಕಮಾಂಡ್ ಅನ್ನು ಎಚ್ಚರಿಸಿದ್ದಾರೆ. ಸುದೀರ್ಘ ಟ್ವೀಟ್‌ನಲ್ಲಿ ಪಕ್ಷ ಸಂಘಟನೆ ಬಲಪಡಿಸಬೇಕಾದ ವಿಚಾರವನ್ನು ಹಾಗೂ ಕುಟುಂಬ ರಾಜಕಾರಣದ ವಿಚಾರವನ್ನು ಅವರು ಹೈಲೈಟ್ ಮಾಡಿದ್ದು, ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.

ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ. ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸ...