ಭಾರತ, ಫೆಬ್ರವರಿ 28 -- ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಪ್ರತಿ ವರ್ಷ ಶಿವರಾತ್ರಿ ಜಾತ್ರಾ ಮಹೋತ್ಸವವನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ವರ್ಷವು ಸಿದ್ಧಾರೂಢ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು. ವಿವಿಧ ಕಾರ್ಯಕ್ರಮಗಳು, ಅಲಂಕಾರ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದಿದ್ದು, ಗುರುವಾರ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ಸದ್ಗುರುಗಳ ರಥೋತ್ಸವ ನೆರವೇರಿತು.

ಸಿದ್ಧಾರೂಢ ಮಹಾರಾಜ್‌ ಕೀ ಜೈ, ಸದ್ಗುರು ಗುರುನಾಥರೂಢ ಮಹಾರಾಜ್‌ ಕೀ ಜೈ, ಹರ ಹರ ಮಹಾದೇವ ಎಂಬ ಜಯ ಘೋಷಗಳೊಂದಿಗೆ ಸದ್ಗುರು ಸಿದ್ದಾರೂಢಸ್ವಾಮಿ ಅವರ ರಥೋತ್ಸವ ಗುರುವಾರ ಅತ್ಯಂತ ಸಂಭ್ರಮದಿಂದ ನೆರವೇರಿತು. ಕರ್ನಾಟಕ ಹಾಗೂ ನೆರೆಯ ರಾಜ್ಯಗಳಿಂದ ಬಂದ ಲಕ್ಷಾಂತರ ಜನರು ಸದ್ಗುರು ಸಿದ್ದಾರೂಢಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.

ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು, ಲಿಂಬೆಹಣ್ಣು ಎಸೆದು ಹರ ಹರ ಮಹಾದೇವ ಘೋಷಣೆ ಕೂಗುವ ಮೂಲಕ ...