Bangalore, ಫೆಬ್ರವರಿ 19 -- ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯೂ ಒಂದು. ಈ ಯೋಜನೆ 2008-13ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರೇ ಮೊದಲ ಬಾರಿಗೆ ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಯ ವಿಸ್ತೃತ ರೂಪದ ಯೋಜನೆ. 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದಂತೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಈ ಯೋಜನೆ 2023, ಜುಲೈ 1ರಿಂದ ಜಾರಿಗೆ ಬಂದಿದೆ. ಆದರೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿಗೆ ಬದಲಾಗಿ ಪ್ರತಿ ಕೆಜಿಗೆ 34 ರೂ.ನಂತೆ 170 ರೂಗಳನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಯೋಜನೆಯ ಫಲಾನುಭವಿಗಳ ಸಂಖ್ಯೆ 4.40 ಕೋಟಿ.

ಆರಂಭದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದ 7 ತಿಂಗಳಲ್ಲೇ 3.92 ಕೋಟಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿತ್ತು. ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರ 2023-24 ಸಾಲಿನಲ್ಲಿ 1...