Bengaluru, ಏಪ್ರಿಲ್ 11 -- ಮಂಗಳೂರು: ಅಪರೂಪದ ಮತ್ತು ಸವಾಲಿನ ಆರೋಗ್ಯ ಸಮಸ್ಯೆಯಾದ ನೆಸಿಡಿಯೋಬ್ಲಾಸ್ಟೋಸಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಗೆ ಕೆಎಂಸಿ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಯುವತಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಈ ಅಪರೂಪದ ನೆಸಿಡಿಯೋಬ್ಲಾಸ್ಟೋಸಿಸ್ ಸಮಸ್ಯೆಯನ್ನು ನುರಿತ ತಜ್ಞರಾದ ಕನ್ಸಲ್ಟೆಂಟ್ ಸರ್ಜಿಕಲ್ ಆನ್ಕೋಲಾಜಿಸ್ಟ್ ಕಾರ್ತಿಕ್ ಕೆ.ಎಸ್ ಅವರ ತಂಡ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆ ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಕುಮಾರಿ ನೇಹಾ (ಹೆಸರು ಬದಲಾಯಿಸಲಾಗಿದೆ) ಎಂಬ 26 ವರ್ಷದ ರೋಗಿ ಹೈಪೊಗ್ಲಿಸಿಮಿಯಾ (ಕಡಿಮೆ ರಕ್ತದಲ್ಲಿನ ಸಕ್ಕರೆ) ಎಂಬ ಮಾರಣಾಂತಿಕ ಕಾಯಿಲೆಯೊಂದಿಗೆ ಕಳೆದ 6 ವರ್ಷಗಳಿಂದ ಹೋರಾಡುತ್ತಿದ್ದರು. ಈ ಕಾಯಿಲೆ ಅಪರೂಪದ್ದಾಗಿದ್ದು ಒಂದು ಮಿಲಿಯನ್ ಜನರಲ್ಲಿ 0.03 ರಷ್ಟು ಕಾಣಿಸಿಕೊಳ್ಳುವಂತದ್ದು. ಈ ಸಮಸ್ಯೆ ಮಾರಣಾಂತಿಕವೂ ಆಗಿದೆ. ಈ ಕಾಯಿಲೆ ಹೊಂದಿದವರಲ್ಲಿ ಮೇದೋಜೀರಕ ಗ್ರಂಥಿ (ಪಾನ್ಕ್ರಿಯಾಸ್) ಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.