Bengaluru, ಮೇ 19 -- ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಪದೇ ಪದೇ ಅಬಕಾರಿ ಶುಲ್ಕ ಹಾಗೂ ಪರವಾನಗಿ ಶುಲ್ಕವನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಮದ್ಯ ತಯಾರಿಕಾ ಡಿಸ್ಟಿಲರಿಗಳು ಮತ್ತು ಮದ್ಯ ಮಾರಾಟಗಾರರು ಮೇ 20 ರಂದು ಪ್ರತಿಭಟನೆ ಮತ್ತು 21 ರಂದು ಉತ್ಪಾದನೆ ಮತ್ತು ಮಾರಾಟವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮತ್ತು ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಲಿಕ್ಕರ್ ಶಾಪ್ ಮಾಲೀಕರು ಸರ್ಕಾರಿ ಡಿಪೋಗಳಿಂದ ಮದ್ಯ ಖರೀದಿ ಮಾಡುವುದನ್ನು ನಿಲ್ಲಿಸಲಿದ್ದಾರೆ. ಮದ್ಯ ತಯಾರಿಕೆ ಮತ್ತು ಬಾಟ್ಲಿಂಗ್ ಶುಲ್ಕ ಹೆಚ್ಚಳ ಮಾಡಿರುವ ಮೇ 15 ರ ಆದೇಶವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘ ಪ್ರತಿಭಟನೆಗೆ ಮುಂದಾಗಿದೆ.
ಬಾಟ್ಲಿಂಗ್ ಮತ್ತು ಮಾರಾಟ ಮಳಿಗೆಗಳು ಸೇರಿ ಎಲ್ಲ ಸ್ವರೂಪದ ಶುಲ್ಕಗಳನ್ನು ಶೇ 100ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ವಿವಿಧ ರೀತಿಯ ಶುಲ್ಕಗಳನ್ನು ಪದೇ ಪದೇ ಏರಿಸಲಾಗುತ್ತಿದೆ. ಇದನ್ನ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.