ಭಾರತ, ಮೇ 23 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025ರ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ತಟಸ್ಥ ಸ್ಥಳದಲ್ಲಿ ಪಂದ್ಯವಾಡುತ್ತಿದೆ. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ (RCB vs SRH) ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ರಜತ್ ಪಾಟೀದಾರ್ ಬದಲಿಗೆ ಜಿತೇಶ್ ಶರ್ಮಾ ಮುನ್ನಡೆಸುತ್ತಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಎಸ್‌ಆರ್‌ಎಚ್ ಉತ್ತಮ ಆರಂಭ ಪಡೆಯಿತು. ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟವಾಡಿ ಔಟಾದರು. ಇವರ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಹೆನ್ರಿಚ್ ಕ್ಲಾಸೆನ್ ಕೂಡಾ ಅಬ್ಬರಿಸಲು ಶುರು ಮಾಡಿದರು.
ಇಶಾನ್ ಜೊತೆಗೂಡಿ ಅಬ್ಬರದ ಆಟ ಆರಂಭಿಸಿದ ಕ್ಲಾಸೆನ್, ದೊಡ್ಡ ಹೊಡೆತಗಳಿಗೆ ಕೈ ಹಾಕಿದರು. ಅದಾಗಲೇ ಎರಡು ಸಿಕ್ಸರ್ ಸಿಡಿಸಿ ಅಬ್ಬರಿಸುತ್ತಿದ್ದ ಅವರು, ಸುಯಶ್ ಶರ್ಮಾ ಎಸೆಯಲು ಬಂದ 9ನೇ ಓವರ್‌ನಲ್ಲಿ ದೊಡ್ಡ ಹೊಡೆತಕ್ಕೆ ಮುಂದ...
Click here to read full article from source
To read the full article or to get the complete feed from this publication, please
Contact Us.