ಭಾರತ, ಏಪ್ರಿಲ್ 13 -- ಸನ್​ರೈಸರ್ಸ್ ಹೈದರಾಬಾದ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಬೆನ್ನಲ್ಲೇ ಪ್ಯಾಂಟ್ ಜೇಬ್​ನಿಂದ ಚೀಟಿ ತೆಗೆದು ಸಂಭ್ರಮಿಸಿದ್ದು ಎಲ್ಲರ ಗಮನ ಸೆಳೆದಿದೆ. ಅದಕ್ಕೆ ಕಾರಣ ಏನೆಂದು ಸಹ ಆಟಗಾರ ಟ್ರಾವಿಸ್ ಹೆಡ್ ವಿವರಿಸಿದ್ದಾರೆ. ಐಪಿಎಲ್​ನ 27ನೇ ಪಂದ್ಯದಲ್ಲಿ ಕಿಂಗ್ಸ್ ವಿರುದ್ಧ ಸ್ಫೋಟಕ ಸೆಂಚುರಿ ಸಿಡಿಸಿ ಹಲವು ದಾಖಲೆ ಬರೆದ ಎಡಗೈ ಆಟಗಾರ, ಇದು ಆರೆಂಜ್ ಆರ್ಮಿಗಾಗಿ ಎಂದು ಚೀಟಿಯಲ್ಲಿ ಬರೆದುಕೊಂಡಿದ್ದರು. ಇದರ ವಿಡಿಯೋ ಮತ್ತು ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಹೈದರಾಬಾದ್​ನ ರಾಜೀವ್ ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕಿಂಗ್ಸ್ 6 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತು. ಶ್ರೇಯಸ್ ಅಯ್ಯರ್ 82 ರನ್ ಸಿಡಿಸಿ ಮಿಂಚಿದರು. ಬೃಹತ್ ಗುರಿ ಬೆನ್ನಟ್ಟಿದ ಎಸ್​ಆರ್​​ಹೆಚ್, 18.3 ಓವರ್​ಗಳಲ್ಲೇ 247 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. 40 ಎಸೆತಗಳಲ್ಲಿ ಶತಕ ಪೂರೈಸಿದ ...