ಭಾರತ, ಏಪ್ರಿಲ್ 13 -- ಸನ್ರೈಸರ್ಸ್ ಹೈದರಾಬಾದ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಬೆನ್ನಲ್ಲೇ ಪ್ಯಾಂಟ್ ಜೇಬ್ನಿಂದ ಚೀಟಿ ತೆಗೆದು ಸಂಭ್ರಮಿಸಿದ್ದು ಎಲ್ಲರ ಗಮನ ಸೆಳೆದಿದೆ. ಅದಕ್ಕೆ ಕಾರಣ ಏನೆಂದು ಸಹ ಆಟಗಾರ ಟ್ರಾವಿಸ್ ಹೆಡ್ ವಿವರಿಸಿದ್ದಾರೆ. ಐಪಿಎಲ್ನ 27ನೇ ಪಂದ್ಯದಲ್ಲಿ ಕಿಂಗ್ಸ್ ವಿರುದ್ಧ ಸ್ಫೋಟಕ ಸೆಂಚುರಿ ಸಿಡಿಸಿ ಹಲವು ದಾಖಲೆ ಬರೆದ ಎಡಗೈ ಆಟಗಾರ, ಇದು ಆರೆಂಜ್ ಆರ್ಮಿಗಾಗಿ ಎಂದು ಚೀಟಿಯಲ್ಲಿ ಬರೆದುಕೊಂಡಿದ್ದರು. ಇದರ ವಿಡಿಯೋ ಮತ್ತು ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.
ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕಿಂಗ್ಸ್ 6 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತು. ಶ್ರೇಯಸ್ ಅಯ್ಯರ್ 82 ರನ್ ಸಿಡಿಸಿ ಮಿಂಚಿದರು. ಬೃಹತ್ ಗುರಿ ಬೆನ್ನಟ್ಟಿದ ಎಸ್ಆರ್ಹೆಚ್, 18.3 ಓವರ್ಗಳಲ್ಲೇ 247 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. 40 ಎಸೆತಗಳಲ್ಲಿ ಶತಕ ಪೂರೈಸಿದ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.