Davangere, ಏಪ್ರಿಲ್ 25 -- ದಾವಣಗೆರೆ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಿರ್ದೋಷಿ ಪ್ರವಾಸಿರ ಮೇಲೆ ನಡೆಸಿದ ಹೀನಕೃತ್ಯ ಭಾರತದ ಜನ ಸಮುದಾಯವನ್ನು ಬೆಚ್ಚಿ ಬೀಳಿಸಿದ್ದು, ಈ ಕೃತ್ಯವನ್ನು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಷ್ಟ್ರದ ಏಕತೆ ಮತ್ತು ಅಖಂಡತೆಯ ಮೇಲೆ ನೇರದಾಳಿ ಆಗಿದ್ದು, ಅತ್ಯಂತ ಶೋಕಾಜನಕ ಹಾಗೂ ಧಿಕ್ಕಾರಾರ್ಹ ಘಟನೆ ಆಗಿದೆ ಎಂದು ಅಭಿಪ್ರಾಯಪಟ್ಟಿರುವ ಈ ದಾಳಿಯು 2000ರ ಚಿಟ್ಟಿಸಿಂಘಪುರ ನರಮೇಧದ ನಂತರದ ಅತ್ಯಂತ ಘೋರ ಘಟನೆಗಳಲ್ಲಿ ಒಂದಾಗಿದೆ. ನಿರಾಯುಧ ನಾಗರಿಕರನ್ನು ಗುರಿಯಾಗಿಸುವ ಈ ಕೃತ್ಯವನ್ನು ಎತ್ತಿ ಹಿಡಿಯುವುದು ಮಾನವೀಯತೆ ವಿರುದ್ಧದ ನಡೆ ಎಂದು ತಿಳಿಸಿದ್ದಾರೆ.

ಈ ಘಟನೆಯಲ್ಲಿ ರಾಜಕೀಯಕ್ಕೆ ಜಾಗವಿಲ್ಲ. ನಾವು ಒಟ್ಟಾಗಿ ನಿಂತು, ಶೋಕಸಂತಪ್ತ ಕುಟುಂಬಗಳಿಗೆ ನ್ಯಾಯ ದೊರಕಿಸಲು ಶ್ರಮಿಸಬೇಕಿದೆ. ಕರ್ನಾಟಕದ ಪ್ರವಾಸಿಗರಾದ ಮೂವರು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದು, ಅತ್ಯಂತ ನೋವಿನ ಸಂಗತಿ ಎಂದು ತಿಳಿಸಿರುವ ಅವರು ಮೃತ ...