ಭಾರತ, ಮಾರ್ಚ್ 25 -- ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ತಮೀಮ್ ಇಕ್ಬಾಲ್ (Tamim Iqbal) ಗಂಭೀರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದಾರೆ. ಮಾರ್ಚ್ 24ರ ಸೋಮವಾರ ಢಾಕಾದಲ್ಲಿ ನಡೆದ ಢಾಕಾ ಪ್ರೀಮಿಯರ್ ಡಿವಿಷನ್ ಕ್ರಿಕೆಟ್ ಲೀಗ್ ಪಂದ್ಯದ ವೇಳೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಪಂದ್ಯ ನಡೆಯುತ್ತಿದ್ದಾಗ ಫೀಲ್ಡಿಂಗ್ ಮಾಡುವ ಸಮಯದಲ್ಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸಿದ ನಂತರ ಇದೀಗ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಯಶಸ್ವಿಯಾಗಿ ನಡೆದಿದೆ. ಸದ್ಯ ಕ್ರಿಕೆಟಿಗ ವೈದ್ಯರ ವೀಕ್ಷಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಬುಲೆಟಿನ್ ತಿಳಿಸಿದೆ.
ವರದಿಗಳ ಪ್ರಕಾರ, ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ಮತ್ತು ಶಿನೆಪುಕುರ್ ಕ್ರಿಕೆಟ್ ಕ್ಲಬ್ ನಡುವಿನ 50 ಓವರ್‌ಗಳ ಪಂದ್ಯದ ಮೊದಲ ಇನ್ನಿಂಗ್ಸ್ ನಡೆಯುತ್ತಿದ್ದಾಗ, ಫೀಲ್ಡಿಂಗ್ ಮಾಡುತ್ತಿದ್ದ 36 ವರ್ಷದ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎದೆನೋವು ಎಂದು ಹೇಳಿದ್ದ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.