ಭಾರತ, ಫೆಬ್ರವರಿ 15 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಫೆಬ್ರವರಿ 16ರ ಭಾನುವಾರದಿಂದ 22ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಉತ್ತಮ ಆರೋಗ್ಯಕ್ಕಾಗಿ ದೈಹಿಕ ವ್ಯಾಯಾಮ ಮತ್ತು ಯೋಗವನ್ನು ಅಭ್ಯಾಸ ಮಾಡಲಿದ್ದೀರಿ. ಕುಟುಂಬ ಸದಸ್ಯರಿಂದ ಉತ್ತಮ ಪ್ರೋತ್ಸಾಹ ಮತ್ತು ಸಹಾಯ ದೊರೆಯುತ್ತದೆ. ದೊರೆವ ಅವಕಾಶದ ಲಾಭ ಪಡೆದುಕೊಳ್ಳುವಿರಿ. ಹಣದ ತೊಂದರೆ ಇರುವುದಿಲ್ಲ. ಹಳೆಯ ಆರ್ಥಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ನೀಡಬಲ್ಲಿರಿ. ಕುಟುಂಬದ ಹಿರಿಯರ ಜೊತೆ ಉತ್ತಮ ಸಂಬಂಧ ವೃದ್ಧಿಯಾಗುತ್ತದೆ. ಸಮಾಜದಲ್ಲಿ ನಿಮಗೆ ವಿಶೇಷ ಗೌರವ ದೊರೆಯುತ್ತದೆ. ನಿಮ್ಮ ಮಾತು ಮತ್ತು ಸಲಹೆಯನ್ನು ಎಲ...