New Delhi, ಮಾರ್ಚ್ 18 -- Aadhaar Voter ID Linking: ಮತದಾರರ ಗುರುತಿನ ಚೀಟಿ (EPIC) ಯನ್ನು ಆಧಾರ್ ಜತೆಗೆ ಜೋಡಿಸುವುದು ಸೇರಿ ಹಲವು ಮಹತ್ವದ ತೀರ್ಮಾವನ್ನು ಭಾರತದ ಚುನಾವಣಾ ಆಯೋಗದ ಉನ್ನತ ಮಟ್ಟದ ಸಮಿತಿ ಮಂಗಳವಾರ (ಮಾರ್ಚ್ 18) ತೆಗೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಲಾಯಿತು. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಸಂವಿಧಾನ ಬದ್ಧವಾಗಿರಲಿದೆ. ಅದೇ ರೀತಿ ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿರುತ್ತದೆ ಎಂದು ಭಾರತದ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಆಧಾರ್‌ ಮತ್ತು ಮತದಾರರ ಗುರುತಿನ ಚೀಟಿ ಜೋಡಣೆ ಪ್ರಕ್ರಿಯೆಯು ಸಂಪೂರ್ಣವಾಗಿ ಕಾನೂನು ಚೌಕಟ್ಟಿನಲ್ಲೇ ನಡೆಯಲಿದೆ. ಈ ಪ್ರಕ್ರಿಯೆಯು ಸಂವಿಧಾನದ 326 ನೇ ವಿಧಿ ಮತ್ತು ಜನ ಪ್ರಾತಿನಿಧ್ಯ ಕಾಯ್ದೆ, 1950 ರ ಸೆಕ್ಷನ್ 23 (4), 23 (5) ಮತ್ತು 23 (6) ಗೆ ಅನುಗುಣವಾಗಿರುತ್ತದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್...