ಭಾರತ, ಮಾರ್ಚ್ 20 -- ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿರುವ, ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಂತಹ ಆ್ಯಪ್‌ಗಳಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ತೆಲುಗಿನ 25 ನಟರು ಮತ್ತು ಇನ್‌ಫ್ಲೂಯೆನ್ಸರ್‌ಗಳ ವಿರುದ್ಧ ದೂರು ದಾಖಲಿಸಲಾಗಿದೆ. ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್ವಾಲ್ ಮತ್ತು ಅನನ್ಯಾ ನಾಗೆಲ್ಲಾ ಸೇರಿದಂತೆ ಟಾಲಿವುಡ್‌ನ ಹಲವು ನಟಿಯರು ಮತ್ತು ನಟರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಆರೋಪಿಗಳಲ್ಲಿ ಕೆಲವು ಟೆಲಿವಿಷನ್‌ ನಿರೂಪಕರು ಮತ್ತು ಸಾಮಾಜಿಕ ಮಾಧ್ಯಮ ಇನ್‌ಫ್ಲೂಯೆನ್ಸರ್‌ಗಳೂ ಸೇರಿದ್ದಾರೆ. ಮಿಯಾಪುರದ ನಿವಾಸಿ ಪಿ.ಎಂ. ಫಣೀಂದ್ರ ಶರ್ಮಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತೆಲಂಗಾಣ ಗೇಮಿಂಗ್ ಕಾಯ್ದೆ, ಬಿಎನ್ಎಸ್ ಮತ್ತು ಐಟಿ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಸೇರಿದಂತೆ 11 ಸೋಷಿಯಲ್‌ ಮೀಡಿ...