ಭಾರತ, ಮೇ 8 -- ಭಾರತದ ಸೇನೆಯು ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ ಮೇಲೆ ಕೈಗೊಂಡ ಕಾರ್ಯಾಚರಣೆಗೆ ಆಪರೇಷನ್ ಸಿಂದೂರ ಎಂದು ಹೆಸರಿಟ್ಟಿದೆ. ಈ ಹೆಸರಿನ ಟ್ರೇಡ್‌ಮಾರ್ಕ್‌ಗಾಗಿ ನಾಲ್ವರು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ರಿಲಯೆನ್ಸ್ ಇಂಡಸ್ಟ್ರೀಸ್ ಕೂಡ ಸೇರಿತ್ತು. ಇದೀಗ ರಿಲಯೆನ್ಸ್ ತನ್ನ ಅರ್ಜಿ ಹಿಂತೆಗೆದುಕೊಂಡಿದೆ. ಟ್ರೇಡ್ ಮಾರ್ಕ್ ನೋಂದಣಿ ವಿಚಾರವಾಗಿ ದೇಶದ ಪ್ರತಿಷ್ಠಿತ ಕಂಪನಿಯಾದ ರಿಲಯನ್ಸ್ ಇಂಡಸ್ಟ್ರೀಸ್ ಪ್ರಮುಖ ಪ್ರಕಟಣೆಯೊಂದನ್ನು ಗುರುವಾರ ನೀಡಿದೆ. ಭಾರತೀಯರ ಶೌರ್ಯದ ಸಂಕೇತವಾಗಿ ರಾಷ್ಟ್ರೀಯ ಪ್ರಜ್ಞೆಯ ಭಾಗವಾಗಿ ಇರುವ "ಆಪರೇಷನ್ ಸಿಂದೂರ್" ಅನ್ನು ಟ್ರೇಡ್‌ಮಾರ್ಕ್ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಕಂಪನಿ ತಿಳಿಸಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಘಟಕವಾದ ಜಿಯೋ ಸ್ಟುಡಿಯೋಸ್ ತನ್ನ ಟ್ರೇಡ್‌ಮಾರ್ಕ್ ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಇದನ್ನು ಕಂಪನಿಯ ಕಿರಿಯ ಸ್ಥಾನದಲ್ಲಿ ಇರುವ ವ್ಯಕ್ತಿಯೊಬ್ಬರು ಅನುಮತಿಯಿಲ್ಲದೆ, ಅಜಾಗರೂಕತೆಯಿಂದ ಟ್ರೇಡ್ ಮಾರ್ಕ್‌ಗೆ ಅರ್ಜಿ ಸಲ್ಲಿಸಿದ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.