ಭಾರತ, ಮೇ 7 -- ನವದೆಹಲಿ: ಆಪರೇಷನ್ ಸಿಂಧೂರ ಮೂಲಕ ಪಹಲ್ಗಾಮ್ ದಾಳಿಗೆ ಭಾರತ ದಿಟ್ಟ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ಬುಧವಾರ ನಸುಕಿನ ಜಾವ ದಾಳಿ ಮಾಡಿದೆ. ಆಪರೇಷನ್ ಸಿಂಧೂರ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ, ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಭಾರತೀಯ ಸೇನೆಯ ಕಾರ್ಫ್ಸ್ ಆಫ್ ಸಿಗ್ನಲ್ಸ್ನ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ, ಏಷ್ಯಾ ಸೇರಿದಂತೆ ಹಲವು ದೇಶಗಳನ್ನೊಳಗೊಂಡ ಬಹುರಾಷ್ಟ್ರೀಯ ಕ್ಷೇತ್ರ ಫೋರ್ಸ್ 18ರಲ್ಲಿ ಭಾರತೀಯ ಸೇನಾ ತರಬೇತಿ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾಗವಹಿಸಿದ ಎಲ್ಲಾ ದೇಶಗಳಲ್ಲಿ ಖುರೇಷಿ ಅವರು ಏಕೈಕ ಮಹಿಳಾ ಕಮಾಂಡರ್ ಆಗಿದ್ದರು. ಇದು ಮಿಲಿಟರಿ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಭಾರತದ ಬದ್ಧತೆಯನ್ನು ಒತ್ತಿ ಹೇಳುತ್ತದೆ....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.