Bengaluru, ಮಾರ್ಚ್ 3 -- Apple Cut Trailer: ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಶಿಲ್ಪಾ ಪ್ರಸನ್ನ ನಿರ್ಮಿಸಿರುವ ಆಪಲ್‌ ಕಟ್‌ ಸಿನಿಮಾದ ಟ್ರೇಲರ್‌ ಬಿಡುಗಡೆ ಆಗಿದೆ. ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ಆಪಲ್‌ ಕಟ್‌ ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಟ್ರೇಲರ್ ನೋಡಿ ಮಾತನಾಡಿದ ನಟ ಗಣೇಶ್, "ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು ಸಾಮಾನ್ಯವಾಗಿ‌ ನನ್ನ ಚಿತ್ರದ ಹೊರತು ಬೇರೆ ಸಮಾರಂಭಗಳಿಗೆ ಹೋಗುವುದು ಕಡಿಮೆ.‌ ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ರಾಜಶೇಖರ್ ಅವರ ಪುತ್ರಿ ಈ ಚಿತ್ರದ ನಿರ್ದೇಶಕರು ಎಂದು ತಿಳಿದು ಸಂತೋಷವಾಯಿತು. ಆ ಕಾರಣಕ್ಕಾಗಿ ಹಾಗೂ ಸ್ನೇಹಿತರಾದ ದಾಸೇಗೌಡರ ಪ್ರೀತಿಯ ಆಹ್ವಾನಕ್ಕಾಗಿ ಇಲ್ಲಿಗೆ ಬಂದಿದ್ದೇನೆ.‌ ಟ್ರೇಲರ್ ನೋಡಿದಾಗ ವಿಭಿನ್ನ ಕಂಟೆಂಟ್ ಚಿತ್ರ ಎಂದು ತಿಳಿಯುತ್ತದೆ" ಎಂದರು.

ಇದನ್ನೂ ಓದಿ: ಆ ಧಾರಾವಾಹಿಗೆ ದೊ...