ಭಾರತ, ಮಾರ್ಚ್ 10 -- ಇಂಡಿಯನ್ಸ್ ಪ್ರೀಮಿಯರ್ ಲೀಗ್​​ ಹರಾಜಿನಲ್ಲಿ 6.25 ಕೋಟಿ ರೂಪಾಯಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿದ್ದ ಇಂಗ್ಲೆಂಡ್ ಬ್ಯಾಟರ್​ ಹ್ಯಾರಿ ಬ್ರೂಕ್ ಅವರು ಟೂರ್ನಿಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಹಿಂದೆ ಸರಿದಿದ್ದಾರೆ. ನಿಯಮ ಉಲ್ಲಂಘಿಸಿದ ಹಿನ್ನೆಲೆ ಅವರನ್ನು ಐಪಿಎಲ್​ನಿಂದ ಎರಡು ವರ್ಷಗಳ ಕಾಲ ನಿಷೇಧಕ್ಕೆ ಒಳಗಾಗಲಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಅವರು ಐಪಿಎಲ್​ಗೆ ಬ್ಯಾನ್ ಆಗಲಿದ್ದಾರೆ ಎಂದು ಇಎಸ್​ಪಿಎನ್ ಕ್ರಿಕ್​ಇನ್​ಫೋ ವರದಿ ಮಾಡಿದೆ.

ಹ್ಯಾರಿ ಬ್ರೂಕ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮತ್ತು ರಾಷ್ಟ್ರೀಯ ತಂಡಕ್ಕೆ ತಮ್ಮ ಬದ್ಧತೆಯನ್ನು ಪ್ರತಿಬಿಂಬಿಸುವ ಕಾರಣ ಐಪಿಎಲ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಆದಾಗ್ಯೂ, ಅವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅವರು ಮುಂದಿನ 2 ಋತುಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ. ನವೆಂಬರ್​​ನಲ್ಲಿ ನಡೆದ ಮೆಗಾ ಹರಾಜಿನಲ್ಲಿ ಬ್ರೂಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಖರೀದಿಸಿತ್ತು.

ಇದರೊಂದಿಗೆ ಬ್ರೂಕ್ ಸತತ 2ನೇ ಬಾರಿಗೆ ಐಪಿಎಲ್​...