ಭಾರತ, ಮಾರ್ಚ್ 14 -- ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್​ಗೆ ದೊಡ್ಡ ಆಘಾತ ಎದುರಾಗಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಬ್ರಿಗೇಡ್​ನ ಬೌಲಿಂಗ್ ಅಸ್ತ್ರವಾದ ವೇಗದ ಬೌಲರ್​ ಜಸ್ಪ್ರೀತ್ ಬುಮ್ರಾ ಅವರು ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಬುಮ್ರಾ ಇಲ್ಲದೆಯೇ ಮುಂಬೈ ತನ್ನ ಐಪಿಎಲ್ ಅಭಿಯಾನ ಪ್ರಾರಂಭಿಸಲಿದ್ದು, ಆರನೇ ಟ್ರೋಫಿ ಗೆಲ್ಲುವ ಕನಸಿನಲ್ಲಿರುವ ಫ್ರಾಂಚೈಸಿಗೆ ಇದು ದೊಡ್ಡ ಹಿನ್ನಡೆ ಎನ್ನಬಹುದು.

ಅನುಭವಿ ವೇಗದ ಬೌಲರ್ ಬುಮ್ರಾ ಬೆನ್ನುನೋವಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಸಂಪೂರ್ಣವಾಗಿ ಫಿಟ್ ಆಗಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಯಾರ್ಕರ್ ಸ್ಪೆಷಲಿಸ್ಟ್​ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ಪುನಶ್ಚೇತನಕ್ಕೆ ಒಳಗಾಗಿದ್ದಾರೆ. ಅವರು ಏಪ್ರಿಲ್ ಆರಂಭ ಅಥವಾ ಎರಡನೇ ವಾರದಲ್ಲಿ ತಂಡವನ್ನು ಸೇರುವ ನಿರೀಕ್ಷೆಯಿದೆ. ಹೀಗಾಗಿ ಸಿಎಸ್...