ಭಾರತ, ಏಪ್ರಿಲ್ 17 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ 2025ರ ಐಪಿಎಲ್​ನ 34ನೇ ಪಂದ್ಯವು ಶುಕ್ರವಾರ (ಏಪ್ರಿಲ್ 18) ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನವು ಆತಿಥ್ಯ ವಹಿಸಲಿದೆ. ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸ್ಕೋರ್ ಅನ್ನು ಡಿಫೆಂಡ್ ಮಾಡಿಕೊಳ್ಳುವ ಮೂಲಕ ಚರಿತ್ರೆ ಸೃಷ್ಟಿಸಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ ತನ್ನ ಕೊನೆ ಪಂದ್ಯದಲ್ಲಿ ಗೆದ್ದು ಲಯ ಕಂಡುಕೊಂಡಿದೆ. ಆದರೆ ಬೆಂಗಳೂರು ಪಾಲಿಗೆ ತವರಿನ ಮೈದಾನವೇ ಕಬ್ಬಿಣದ ಕಡಲೆಯಾಗಿದ್ದು, ಪಂಜಾಬ್ ಬೌಲಿಂಗ್ ದಾಳಿಯನ್ನು ಹೇಗೆ ಎದುರಿಸುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಆರ್​ಸಿಬಿ ಪ್ರಸ್ತುತ ಆವೃತ್ತಿಯಲ್ಲಿ ತವರು ಮೈದಾನ ಚಿನ್ನಸ್ವಾಮಿಯಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಆರ್​ಸಿಬಿ ಬ್ಯಾಟ್ಸ್​ಮನ್​ಗಳು ನಿಧಾನಗತಿಯ ಪಿಚ್​​ನಲ್ಲಿ ಗುಜರಾತ್ ಟೈಟಾನ್ಸ್​ನ ಆರ್ ...