ಭಾರತ, ಏಪ್ರಿಲ್ 17 -- ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ 2025ರ ಐಪಿಎಲ್ನ 34ನೇ ಪಂದ್ಯವು ಶುಕ್ರವಾರ (ಏಪ್ರಿಲ್ 18) ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನವು ಆತಿಥ್ಯ ವಹಿಸಲಿದೆ. ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸ್ಕೋರ್ ಅನ್ನು ಡಿಫೆಂಡ್ ಮಾಡಿಕೊಳ್ಳುವ ಮೂಲಕ ಚರಿತ್ರೆ ಸೃಷ್ಟಿಸಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್ಸಿಬಿ ತನ್ನ ಕೊನೆ ಪಂದ್ಯದಲ್ಲಿ ಗೆದ್ದು ಲಯ ಕಂಡುಕೊಂಡಿದೆ. ಆದರೆ ಬೆಂಗಳೂರು ಪಾಲಿಗೆ ತವರಿನ ಮೈದಾನವೇ ಕಬ್ಬಿಣದ ಕಡಲೆಯಾಗಿದ್ದು, ಪಂಜಾಬ್ ಬೌಲಿಂಗ್ ದಾಳಿಯನ್ನು ಹೇಗೆ ಎದುರಿಸುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.
ಆರ್ಸಿಬಿ ಪ್ರಸ್ತುತ ಆವೃತ್ತಿಯಲ್ಲಿ ತವರು ಮೈದಾನ ಚಿನ್ನಸ್ವಾಮಿಯಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಆರ್ಸಿಬಿ ಬ್ಯಾಟ್ಸ್ಮನ್ಗಳು ನಿಧಾನಗತಿಯ ಪಿಚ್ನಲ್ಲಿ ಗುಜರಾತ್ ಟೈಟಾನ್ಸ್ನ ಆರ್ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.