ಭಾರತ, ಮಾರ್ಚ್ 11 -- ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ನ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನೊಂದಿಗೆ ಅಭಿಯಾನ ಮುಗಿಸಿದೆ. ಅತ್ತ ಸೋತ ಮುಂಬೈ ಇಂಡಿಯನ್ಸ್ ಫೈನಲ್​ ಕನಸು ಭಗ್ನಗೊಂಡಿದ್ದು, ಎಲಿಮಿನೇಟರ್​ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮಾರ್ಚ್​ 13ರಂದು ಎದುರಿಸಲಿದೆ. ಮತ್ತೊಂದೆಡೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾದ ಡೆಲ್ಲಿ ಕ್ಯಾಪಿಟಲ್ಸ್ ಸತತ 3ನೇ ಬಾರಿಗೆ ಫೈನಲ್​ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದು, ಮಾರ್ಚ್​ 15ರಂದು ಎಲಿಮಿನೇಟರ್​ನಲ್ಲಿ ಗೆದ್ದ ತಂಡದೊಂದಿಗೆ ಪ್ರಶಸ್ತಿ ಸುತ್ತಿನಲ್ಲಿ ಸೆಣಸಾಟ ನಡೆಸಲಿದೆ.

ಆರ್​ಸಿಬಿ ಪಾಲಿಗೆ ಇದು ಔಪಚಾರಿಕ ಪಂದ್ಯವಾಗಿತ್ತು. ಗೆದ್ದರೂ ಸೋತರೂ ಯಾವುದೇ ಪ್ರಯೋಜನ ಇರಲಿಲ್ಲ. ಇದೀಗ ಅಂತಿಮ ಪಂದ್ಯದಲ್ಲಿ ಗೆಲುವಿನ ನಗೆ ಬೀರಿ ಅಂಕ ಪಟ್ಟಿಯಲ್ಲಿ 6 ಅಂಕ ಸಂಪಾದಿಸಿ 4ನೇ ಸ್ಥಾನದೊಂದಿಗೆ ಅಭಿಯಾನ ಮುಗಿಸಿದೆ. ಕಳೆದ ಬಾರಿ ಟ್ರೋಫಿಗೆ ಮುತ್ತಿಕ್ಕಿದ್ದ ಸ್ಮೃತಿ ಮಂಧಾನ ಪಡೆ, ತಮ್ಮ ಹಾಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ವಿಫಲವಾಯಿತು....