ಭಾರತ, ಮಾರ್ಚ್ 19 -- 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಆರಂಭಕ್ಕೆ‌ ಕೆಲವೇ ದಿನಗಳು ಬಾಕಿ ಉಳಿದಿದೆ. ಮಾರ್ಚ್ 22ರಿಂದ ಶ್ರೀಮಂತ ಲೀಗ್‌ಗೆ ಅದ್ಧೂರಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (RCB vs KKR 2025) ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯಕ್ಕೆ ಕೋಲ್ಕತ್ತಾದ ಈಡನ್​ ಗಾರ್ಡನ್ಸ್​ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಕೆಕೆಆರ್ ಮಣಿಸಿ ಅಭಿಯಾನ ಆರಂಭಿಸುವ ಉತ್ಸಾಹದಲ್ಲಿರುವ ಈ ವರ್ಷ ಟ್ರೋಫಿ ಬರ ನೀಗಿಸಬೇಕು ಎಂದು ಭರ್ಜರಿ ಕಸರತ್ತು ನಡೆಸುತ್ತಿದೆ.

2009, 2011, 2016ರಲ್ಲಿ ಐಪಿಎಲ್ ಪ್ರವೇಶಿಸಿದ್ದ ಆರ್​​ಸಿಬಿ ಟ್ರೋಫಿ ಎತ್ತಲು ಸಾಧ್ಯವಾಗಿರಲ್ಲ. 18ನೇ ಆವೃತ್ತಿಯಲ್ಲಾದರೂ ಟ್ರೋಫಿ ಕನಸು ನನಸಾಗುತ್ತಾ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಆರ್​ಸಿಬಿ ತಂಡ ತೊರೆದು ಬೇರೊಂದು ತಂಡ ಸೇರಿದ ಸ್ಟಾರ್​ ಆಟಗಾರರು ಮಾತ್ರ ಟ್ರೋಫಿ ಗೆದ್ದು ಬೀಗಿದ್ದಾರೆ. ಆರ್​​ಸಿಬಿಯಿಂದ‌ ಮತ್ತೊಂದು ತಂಡ ಸೇರಿ ಐಪಿಎಲ್ ಪ್ರಶಸ...