ಭಾರತ, ಮಾರ್ಚ್ 15 -- ಬಹುನಿರೀಕ್ಷಿತ ಐಪಿಎಲ್ 2025 ಮಾರ್ಚ್​ 22ರಿಂದ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಕದನಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರಿಕೆಟ್ ಮೈದಾನವು ಆತಿಥ್ಯ ವಹಿಸಲಿದೆ. 2024ರಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟ್ರೋಫಿಗೆ ಮುತ್ತಿಕ್ಕಿದ್ದ ಕೆಕೆಆರ್, ಈ ಸಲ ಅಜಿಂಕ್ಯ ರಹಾನೆ ಸಾರಥ್ಯದಲ್ಲಿ ಅಗ್ನಿ ಪರೀಕ್ಷೆಗೆ ಸಜ್ಜಾಗಿದೆ.

ಟ್ರೋಫಿ ಗೆದ್ದುಕೊಟ್ಟರೂ ಸರಿಯಾದ ಸ್ಥಾನಮಾನ ಸಿಗಲಿಲ್ಲ ಎಂಬ ಕಾರಣಕ್ಕೆ ತಂಡ ತೊರೆದಿರುದಾಗಿ ಅಯ್ಯರ್ ಹೇಳಿದ್ದಾರೆ. ಹಾಗಾಗಿ ಕಳೆದ ವರ್ಷ ನವೆಂಬರ್​ ಅಂತ್ಯದಲ್ಲಿ ನಡೆದ ಮೆಗಾ ಹರಾಜಿನಲ್ಲಿ 26.75 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್​ ಪಾಲಾಗಿರುವ ಅಯ್ಯರ್, ಚೊಚ್ಚಲ ಕಪ್ ಗೆದ್ದುಕೊಡುವ ಭರವಸೆ ಮೂಡಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಕಳಪೆ ದಾಖಲೆ ಹೊಂದಿರುವ ರಹಾನೆಗೆ ಬಲಿಷ್ಠ ಪ್ಲೇಯಿಂಗ್ 11 ರೂಪಿಸುವುದು ದೊಡ್ಡ ಸವಾಲಾಗಿ...