ಭಾರತ, ಮಾರ್ಚ್ 15 -- ಬಹುನಿರೀಕ್ಷಿತ ಐಪಿಎಲ್ 2025 ಮಾರ್ಚ್ 22ರಿಂದ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಕದನಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರಿಕೆಟ್ ಮೈದಾನವು ಆತಿಥ್ಯ ವಹಿಸಲಿದೆ. 2024ರಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟ್ರೋಫಿಗೆ ಮುತ್ತಿಕ್ಕಿದ್ದ ಕೆಕೆಆರ್, ಈ ಸಲ ಅಜಿಂಕ್ಯ ರಹಾನೆ ಸಾರಥ್ಯದಲ್ಲಿ ಅಗ್ನಿ ಪರೀಕ್ಷೆಗೆ ಸಜ್ಜಾಗಿದೆ.
ಟ್ರೋಫಿ ಗೆದ್ದುಕೊಟ್ಟರೂ ಸರಿಯಾದ ಸ್ಥಾನಮಾನ ಸಿಗಲಿಲ್ಲ ಎಂಬ ಕಾರಣಕ್ಕೆ ತಂಡ ತೊರೆದಿರುದಾಗಿ ಅಯ್ಯರ್ ಹೇಳಿದ್ದಾರೆ. ಹಾಗಾಗಿ ಕಳೆದ ವರ್ಷ ನವೆಂಬರ್ ಅಂತ್ಯದಲ್ಲಿ ನಡೆದ ಮೆಗಾ ಹರಾಜಿನಲ್ಲಿ 26.75 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ಪಾಲಾಗಿರುವ ಅಯ್ಯರ್, ಚೊಚ್ಚಲ ಕಪ್ ಗೆದ್ದುಕೊಡುವ ಭರವಸೆ ಮೂಡಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಕಳಪೆ ದಾಖಲೆ ಹೊಂದಿರುವ ರಹಾನೆಗೆ ಬಲಿಷ್ಠ ಪ್ಲೇಯಿಂಗ್ 11 ರೂಪಿಸುವುದು ದೊಡ್ಡ ಸವಾಲಾಗಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.