ಭಾರತ, ಏಪ್ರಿಲ್ 2 -- ಆರ್ಸಿಬಿ ಮಾಜಿ ವೇಗಿ ಮೊಹಮ್ಮದ್ ಸಿರಾಜ್ (19/3) ಮಾರಕ ಬೌಲಿಂಗ್ ದಾಳಿ ಮತ್ತು ಜೋಸ್ ಬಟ್ಲರ್ ಅರ್ಧಶತಕ, ಸಾಯಿ ಸುದರ್ಶನ್ (49) ಆಕರ್ಷಕ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್ಸಿಬಿ ತವರಿನ ಪ್ರೇಕ್ಷಕರ ಮುಂದೆ ಮುಗ್ಗರಿಸಿ ಮೊದಲ ಸೋಲಿಗೆ ಶರಣಾಗಿದೆ. ಆದರೆ ಇದು ಗುಜರಾತ್ಗೆ ಸತತ 2ನೇ ಗೆಲುವು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ನ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿತು. ಬ್ಯಾಟರ್ಗಳ ವೈಫಲ್ಯದ ನಡುವೆಯೂ ಲಿಯಾಮ್ ಲಿವಿಂಗ್ಸ್ಟೋನ್ ಸಿಡಿಸಿದ ಅದ್ಭುತ ಅರ್ಧಶತಕದ ಸಹಾಯದಿಂದ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು.
ಆರ್ಸಿಬಿ ಬ್ಯಾಟರ್ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದ ಆರ್ಸಿಬಿಯ ಮಾಜಿ ವೇಗಿ ಮೊಹಮ್ಮದ್ ಸಿರಾಜ್,...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.