ಭಾರತ, ಏಪ್ರಿಲ್ 12 -- ಐಪಿಎಲ್‌ನಲ್ಲಿ ಭಾನುವಾರ ಮತ್ತೆ ಎರಡು ಪಂದ್ಯಗಳು ನಡೆಯುತ್ತಿವೆ. ವಾರಾಂತ್ಯ ದಿನ (ಏಪ್ರಿಲ್‌ 13) ಆಗಿರುವುದರಿಂದ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗಲಿದೆ. ಅದರಲ್ಲೂ ದಿನದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡ ಆಡುತ್ತಿರುವುದು ಇನ್ನೂ ವಿಶೇಷ. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯದಲ್ಲಿ ಆರ್‌ಸಿಬಿ ತಂಡವು ಹಸಿರು ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಇದೇ ವೇಳೆ ದಿನದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳು ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಪ್ರಸಕ್ತ ಐಪಿಎಲ್‌ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ತವರಿನ ಹೊರಗೆ ಆಡಿದ ಪಂದ್ಯಗಳಲ್ಲಿ ಒಂದನ್ನೂ ಸೋತಿಲ್ಲ. ಅತ್ತ ರಾಜಸ್ಥಾನ ತಂಡ ಈವರೆಗೆ 2 ಪಂದ್ಯಗಳಲ್ಲಿ ಗೆದ್ದು 3ರಲ್ಲಿ ಸೋತಿದೆ. ಡೆಲ್ಲಿ ...